top of page

IPL 2025 ಮೆಗಾ ಹರಾಜು: RCB ಮಾಲೀಕರ ಮೇಲೆ ಕರ್ನಾಟಕ ಸರ್ಕಾರ ಒತ್ತಡ? ವರದಿಯಲ್ಲೇನಿದೆ? ವಾಪಸ್ ಬರ್ತಾರಾ KL Rahul?

  • Writer: new waves technology
    new waves technology
  • Oct 24, 2024
  • 2 min read

ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ತಂಡವು ಎಂದಿಗೂ ಸ್ಥಳೀಯ ಪ್ರತಿಭೆಗಳನ್ನು ಗುರಿಯಾಗಿಸಿಕೊಂಡಿಲ್ಲ.











ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೇಲೆ ಕರ್ನಾಟಕ ಸರ್ಕಾರ ಒತ್ತಡ ಹೇರಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಆಂಗ್ಲಪತ್ರಿಕೆಯೊಂದು ವರದಿ ಮಾಡಿದ್ದು, ಐಪಿಎಲ್ 2025 ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೇಲೆ ಕರ್ನಾಟಕ ಸರ್ಕಾರ ಒತ್ತಡ ಹೇರುತ್ತಿದ್ದು, ಕರ್ನಾಟಕದ ಸ್ಥಳೀಯ ಆಟಗಾರರಿಗೆ ಅವಕಾಶ ನೀಡುವಂತೆ RCB ಮೇಲೆ ಒತ್ತಡ ಹೇರಿದೆ ಎಂದು ಹೇಳಲಾಗಿದೆ.

ವರದಿಯಲ್ಲೇನಿದೆ?

ವರದಿ ಪ್ರಕಾರ, ಐಪಿಎಲ್ ಮೆಗಾ ಹರಾಜಿನ ರಿಟೆನ್ಷನ್​ಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಸಂಕಷ್ಟಕ್ಕೆ ಸಿಲುಕಿದೆ. ಇಲ್ಲಿ ಮುಖ್ಯವಾಗಿ ಆರ್​ಸಿಬಿ ರಾಜ್ಯ ಸರ್ಕಾರದಿಂದ “ಗಣನೀಯ ಒತ್ತಡವನ್ನು” ಎದುರಿಸುತ್ತಿದೆ ತಿಳಿಸಲಾಗಿದೆ. ಇದರರ್ಥ RCB ತಮ್ಮ ತಂಡದಲ್ಲಿ ಹೆಚ್ಚಿನ ಕರ್ನಾಟಕದ ಆಟಗಾರರನ್ನು ನೇಮಿಸಿಕೊಳ್ಳಬೇಕಾಗುತ್ತದೆ. ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ತಂಡವು ಎಂದಿಗೂ ಸ್ಥಳೀಯ ಪ್ರತಿಭೆಗಳನ್ನು ಗುರಿಯಾಗಿಸಿಕೊಂಡಿಲ್ಲ.

ಹೀಗಾಗಿಯೇ ಬೆಂಗಳೂರು ಫ್ರಾಂಚೈಸಿ ತಂಡದಲ್ಲಿ ರಾಜ್ಯದ ಆಟಗಾರರ ಕೊರತೆ ಎದ್ದು ಕಾಣುತ್ತಿರುತ್ತದೆ. ಆದರೆ ಈ ಬಾರಿ ಆರ್​ಸಿಬಿ ಫ್ರಾಂಚೈಸಿಯ ವ್ಯವಹಾರಗಳಲ್ಲಿ ಕರ್ನಾಟಕ ಸರ್ಕಾರ ಮಧ್ಯಪ್ರವೇಶಿಸಲು ನಿರ್ಧರಿಸಿದೆ. ಇದರಿಂದ ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಕಾರ್ಯತಂತ್ರಗಳನ್ನು ಬದಲಿಸಬೇಕಾಗಿ ಬರಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.

IPL 2025: ಲಖನೌ ತೊರೆದು RCB ಗೆ ಕೆಎಲ್ ರಾಹುಲ್ ವಾಪಸ್?; ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆ!


ಆರ್ ಸಿಬಿ ತಂಡದಲ್ಲಿ ಕನ್ನಡಿಗರಿಗಿಲ್ಲ ಅವಕಾಶ?

ಇನ್ನು ಐಪಿಎಲ್ ಆರಂಭವಾದಾಗಿನಿಂದಲೂ ಆರ್ ಸಿಬಿಯಲ್ಲಿ ಕರ್ನಾಟಕದ ಆಟಗಾರರಿಗೆ ಅವಕಾಶ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಕೇವಲ ಪ್ರೇಕ್ಷಕರು ಮತ್ತು ಅಭಿಮಾನಿಗಳು ಅಲ್ಲ... ಆಟಗಾರರು ಮತ್ತು ಮಾಜಿ ಆಟಗಾರರೂ ಕೂಡ ಇಂತಹ ಆರೋಪಗಳನ್ನು ಆಗಾಗ ಮಾಡುತ್ತಿರುತ್ತಾರೆ. ಇದಕ್ಕೆ ಇಂಬು ನೀಡುವಂತೆ ಕಳೆದ ಬಾರಿಯ ಆರ್ ಸಿಬಿ ತಂಡದಲ್ಲಿದ್ದದ್ದು ಕರ್ನಾಟಕದ ಇಬ್ಬರು ಆಟಗಾರರು ಮಾತ್ರ. ಇವರಲ್ಲಿ ವಿಜಯಕುಮಾರ್ ವೈಶಾಕ್ 4 ಪಂದ್ಯಗಳನ್ನಾಡಿದರೆ, ಮನೋಜ್ ಭಾಂಡ ಆಡಿದ್ದಕ್ಕಿಂತ ಬೆಂಚ್ ಕಾದಿದ್ದೇ ಹೆಚ್ಚು..

ಮಹಾರಾಜ ಟ್ರೋಫಿಯಲ್ಲಿ ಕನ್ನಡಿಗರ ಸಾಮರ್ಥ್ಯ ಅನಾವರಣ

ಇನ್ನು ಇತ್ತೀಚೆಗೆ ನಡೆದ ಮಹಾರಾಜ ಟಿ20 ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಭಾಂಡಗೆ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟಿದ್ದರು. ಭಾಂಡಾ ಮಾತ್ರವಲ್ಲ ಹಲವು ಉದಯೋನ್ಮುಖ ಆಟಗಾರರು ಮಹಾರಾಜ ಸರಣಿಯಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡಿದ್ದಾರೆ. ಇದೀಗ ಐಪಿಎಲ್​ನ 18ನೇ ಆವೃತ್ತಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಸ್ಥಳೀಯ ಆಟಗಾರರಿಗೆ ಅವಕಾಶ ನೀಡುವಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜ್ಯ ಸರ್ಕಾರದ ಮೂಲಗಳು ಸೂಚಿಸಿವೆ ಎಂದು ವದಿಯಾಗಿದೆ.

ಐಪಿಎಲ್ ಪ್ರಶಸ್ತಿ ಬರ ಕೊನೆಗೊಳಿಸಲು ಆರ್‌ಸಿಬಿ ತೊರೆಯಿರಿ, ಈ ಫ್ರಾಂಚೈಸಿಗೆ ಸೇರಿಕೊಳ್ಳಿ: ವಿರಾಟ್ ಕೊಹ್ಲಿಗೆ ಸಲಹೆ

ಐಪಿಎಲ್ ರಿಟೈನ್ ನಿಯಮವೇನು?

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ಉಳಿಸಿಕೊಂಡ 6 ಆಟಗಾರರಲ್ಲಿ ಒಬ್ಬರು ಅನ್​ಕ್ಯಾಪ್ಡ್ ಪ್ಲೇಯರ್ ಇರಲೇಬೇಕು. ಇಲ್ಲಿ ಆರ್​ಸಿಬಿ ತಂಡದಲ್ಲಿ ಅನ್​ಕ್ಯಾಪ್ಡ್ ಕನ್ನಡಿಗರಾಗಿ ವಿಜಯಕುಮಾರ್ ವೈಶಾಕ್ ಹಾಗೂ ಮನೋಜ್ ಬಾಂಢಗೆ ಇದ್ದಾರೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ರಿಟೈನ್ ಆದರೂ ಅಚ್ಚರಿಪಡಬೇಕಿಲ್ಲ. ಹಾಗೆಯೇ ಹೀಗೆ 6 ಆಟಗಾರರನ್ನು ಉಳಿಸಿಕೊಂಡರೆ ಒಟ್ಟು 79 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ. ಇನ್ನು ಐವರು ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಂಡರೆ 75 ಕೋಟಿ ರೂ. ವ್ಯಯಿಸಬೇಕೆಂದು ತಿಳಿಸಲಾಗಿದೆ. ಈ ಮೊತ್ತವನ್ನು ಒಟ್ಟು ಹರಾಜು ಮೊತ್ತದಿಂದ, ಅಂದರೆ 120 ಕೋಟಿ ರೂ.ನಿಂದ ಕಡಿತ ಮಾಡಲಾಗುತ್ತದೆ.

ವಾಪಸ್ ಬರ್ತಾರಾ KL Rahul

ಕಳೆದ ಬಾರಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸಿದ್ದ ಕನ್ನಡಿಗ ಕೆಎಲ್ ರಾಹುಲ್ ಈ ಬಾರಿ ಆರ್ ಸಿಬಿ ತಂಡವನ್ನು ಸೇರಿಕೊಳ್ಳುವ ಕುರಿತು ಒತ್ತಡವಿದೆ. ಕಳೆದ ಬಾರಿ ಲಕ್ನೋ ತಂಡದ ಮಾಲೀಕರು ಕೆಎಲ್ ರಾಹುಲ್ ರನ್ನು ನಡೆಸಿಕೊಂಡ ರೀತಿಗೆ ಕನ್ನಡಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದೂ ಕೂಡ ಕೆಎಲ್ ರಾಹುಲ್ ಆರ್ ಸಿಬಿ ತಂಡಕ್ಕೆ ವಾಪಸ್ ಆಗುವ ಕುರಿತು ನಿರ್ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತೀಚೆಗೆ ಬೆಂಗಳೂರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲೂ ಆರ್ ಸಿಬಿ ಅಭಿಮಾನಿಗಳು ಕೆಎಲ್ ರಾಹುಲ್ ರನ್ನು ತಂಡಕ್ಕೆ ವಾಪಸ್ ಬರುವಂತೆ ಮನವಿ ಮಾಡಿದ್ದರು. ಇದಕ್ಕೆ ಕೆಎಲ್ ರಾಹುಲ್ ನಗುತ್ತಲೇ ಸುಮ್ಮನಾಗಿದ್ದರು.

Comments


bottom of page