top of page

IPL 2025: LSG ವಿರುದ್ಧ DC ಭರ್ಜರಿ ಗೆಲುವು

  • Writer: new waves technology
    new waves technology
  • Apr 23
  • 1 min read

ಇಂದು ಲಖನೌನ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಲಖನೌ ತಂಡ, ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 159 ರನ್ ಸೇರಿಸಿತು.

ree

ಲಖನೌ: ಲಖನೌನಲ್ಲಿ ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 40ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್(LSG) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್(DC) ಭರ್ಜರಿ ಗೆಲುವು ಸಾಧಿಸಿದೆ.

ಇಂದು ಲಖನೌನ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಲಖನೌ ತಂಡ, ಏಡೆನ್ ಮಾರ್ಕರಂ ಅವರ ಅರ್ಧ ಶತಕ(52) ಹಾಗೂ ಮಿಚೆಲ್ ಮಾರ್ಛ್(45) ಅವರ ಬಿರುಸಿನ ಆರಂಭದೊಂದಿಗೆ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 159 ರನ್ ಸೇರಿಸಿತು.

ಗೆಲುವಿಗೆ 160 ರನ್ ಗಳ ಗುರಿ ಬೆನ್ನತ್ತಿದ ಡೆಲ್ಲಿ ತಂಡ, ಕೆಎಲ್ ರಾಹುಲ್(57) ಹಾಗೂ ಅಭಿಷೇಕ್ ಪೊರೆಲ್ ಅವರ ಉತ್ತಮ ಜೊತೆಯಾಟದ ನೆರವಿನಿಂದ 17.5 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 161 ರನ್ ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು.


Comments


bottom of page