Jharkhand Encounter: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧ ಹುತಾತ್ಮ, ನಕ್ಸಲರ ವಿರುದ್ಧ ಮುಂದುವರೆದ ಕಾರ್ಯಾಚರಣೆ
- new waves technology
- Sep 4
- 1 min read
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧನನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಂಚಿ: ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ಗುರುವಾರ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಇಬ್ಬಲು ಯೋಧರೊಬ್ಬರು ಹುತಾತ್ಮರಾಗಿದ್ದರೆ, ಮತ್ತೋರ್ವ ಯೋಧ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಮನಾಟು ಪೊಲೀಸ್ ಠಾಣೆ ವ್ಯಾಪ್ತಿಯ ಕೇದಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಿಷೇಧಿತ ತೃತೀಯಾ ಸಮ್ಮೇಳನ ಪ್ರಸ್ತುತಿ ಸಮಿತಿ (ಟಿಎಸ್‌ಪಿಸಿ)ಗೆ ಸೇರಿದ ಮಾವೋವಾದಿಗಳ ನಡುವೆ ತಡರಾತ್ರಿ 12.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧನನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಲಮು ಡಿಐಜಿ ನೌಶಾದ್ ಆಲಂ ಅವರು ತಿಳಿಸಿದ್ದಾರೆ.










Comments