ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ನವದೆಹಲಿಯ ಭಾರತ್ ಮಂಟಪದಲ್ಲಿ ಸಹಿ ಹಾಕಲಾಗಿದ್ದು, ಈ ಒಪ್ಪಂದವು ಭಾರತದ ರಫ್ತು ವಲಯ ಮತ್ತು ಸಣ್ಣ ಉದ್ದಿಮೆಗಳಿಗೆ (MSME) ದೊಡ್ಡ ಮಟ್ಟದ ಉತ್ತೇಜನ ನೀಡಲಿದೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ನ್ಯೂಜಿಲೆಂಡ್‌ನ ವ್ಯಾಪಾರ ಮತ್ತು ಹೂಡಿಕೆ ಸಚಿವ ಟಾಡ್ ಮೆಕ್‌ಕ್ಲೇ ಅವರ ಸಮ್ಮುಖದಲ್ಲಿ ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದವು ಅಕ್ಟೋಬರ್ 2026 ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ.