top of page

ಕಾಲ್ತುಳಿತ; ಬಂಧಿತರಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು, ಪಾಸ್‌ಪೋರ್ಟ್ ಒಪ್ಪಿಸಲು ಸೂಚನೆ

  • Writer: new waves technology
    new waves technology
  • Jun 12
  • 1 min read

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತಮ್ಮನ್ನು ಬಿಡುಗಡೆ ಮಾಡುವಂತೆ ಕೋರಿ ಆರ್‌ಸಿಬಿ ಮತ್ತು ಡಿಎನ್ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪದಾಧಿಕಾರಿಗಳು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರ ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಆದೇಶಿಸಿದೆ.

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತಮ್ಮನ್ನು ಬಿಡುಗಡೆ ಮಾಡುವಂತೆ ಕೋರಿ ಆರ್‌ಸಿಬಿ ಮತ್ತು ಡಿಎನ್ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪದಾಧಿಕಾರಿಗಳು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಪರ ಅವರ ಪತ್ನಿ ಮಾಳವಿಕಾ ನಾಯಕ್, ಡಿಎನ್ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಡೆಟ್ ಕಂಪನಿ ನಿರ್ದೇಶಕ ಆರ್ ಸುನೀಲ್ ಮ್ಯಾಥ್ಯೂ ಪರವಾಗಿ ಅವರ ಪತ್ನಿ ರೋಷನಿ ಸುನೀಲ್, ಎಸ್ ಕಿರಣ್ ಕುಮಾರ್ ಪರವಾಗಿ ಅವರ ಪತ್ನಿ ಕೆ ನಂದಿನಿ ಮತ್ತು ಶಮಂತ್ ಎನ್‌ಪಿ ಮಾವಿನಕೆರೆ ಅವರ ತಾಯಿ ನಿರ್ಮಲಾ ರಿಟ್ ಅರ್ಜಿಗಳನ್ನು ಸಲ್ಲಿಸಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ಆರ್ ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ, ಬಂಧಿತರಿಗೆ ಷರತ್ತುಬದ್ದ ಮಧ್ಯಂತರ ಜಾಮೀನು ನೀಡಿದ್ದು, ಅರ್ಜಿದಾರರು ತಮ್ಮ ಪಾಸ್‌ಪೋರ್ಟ್‌ ಅನ್ನು ಒಪ್ಪಿಸುವಂತೆ ಸೂಚಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಮಧ್ಯಂತರ ಆದೇಶವನ್ನು ಪೀಠವು ಗುರುವಾರ ಮಧ್ಯಾಹ್ನ ಪ್ರಕಟಿಸಿತು.

ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ್ದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್‌ನ ಸುನಿಲ್ ಮ್ಯಾಥ್ಯೂ, ಕಿರಣ್ ಕುಮಾರ್ ಎಸ್ ಮತ್ತು ಶಮಂತ್ ಎನ್‌ಪಿ ಮಾವಿನಕೆರೆ ಅವರನ್ನು ಜೂನ್ 6ರಂದು ಬಂಧಿಸಲಾಯಿತು.

Comments


bottom of page