top of page

ಮಂಡ್ಯ: ಸೇತುವೆಗೆ ಡಿಕ್ಕಿ ಹೊಡೆದ ಬೈಕ್; ಕಾಲುವೆಗೆ ಬಿದ್ದು ಇಬ್ಬರು ಸಾವು

  • Writer: new waves technology
    new waves technology
  • Jul 7
  • 1 min read

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ree

ಮಂಡ್ಯ: ವಿಶ್ವೇಶ್ವರಯ್ಯ ಕಾಲುವೆಯ ಸೇತುವೆಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಮೋಟಾರ್ ಸೈಕಲ್‌ನಲ್ಲಿ ಇಬ್ಬರು ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಸೇತುವೆ ದಾಟುವಾಗ ಸವಾರನ ನಿಯಂತ್ರಣ ತಪ್ಪಿ ಬೈಕ್ ರೇಲಿಂಗ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರೂ ಕಾಲುವೆಗೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೃತರ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

Comments


bottom of page