top of page

ಆಪರೇಷನ್ ಸಿಂಧೂರ': KKR vs CSK ಪಂದ್ಯದ ವೇಳೆಯೇ ಕ್ರೀಡಾಂಗಣವನ್ನು ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ

  • Writer: new waves technology
    new waves technology
  • May 8
  • 1 min read

ಕೆಕೆಆರ್ vs ಸಿಎಸ್‌ಕೆ ಪಂದ್ಯದ ವೇಳೆಯೇ ಸಿಎಬಿಗೆ ಈ ಮೇಲ್ ಬಂದಿದೆ ಎನ್ನಲಾಗಿದ್ದು, ಮತ್ತೊಂದೆಡೆ, ಮೇ 11ರಂದು ಗುಜರಾತ್ ಟೈಟಾನ್ಸ್ ಪಂದ್ಯವು ಗುಜರಾತ್‌ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಎರಡೂ ಕ್ರೀಡಾಂಗಣಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಬುಧವಾರ ಬೆಳಗಿನ ಜಾವ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ ನಂತರ, ಈಗ ದೇಶದ ಎರಡು ಕ್ರಿಕೆಟ್ ಸಂಸ್ಥೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ. ವಿವಿಧ ವರದಿಗಳ ಪ್ರಕಾರ, ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಮತ್ತು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್‌ಗೆ ಉಗ್ರರು ಬಾಂಬ್ ಬೆದರಿಕೆಯೊಡ್ಡಿದ್ದಾರೆ.

ಕೆಕೆಆರ್ vs ಸಿಎಸ್‌ಕೆ ಪಂದ್ಯದ ವೇಳೆಯೇ ಸಿಎಬಿಗೆ ಈ ಮೇಲ್ ಬಂದಿದೆ ಎನ್ನಲಾಗಿದ್ದು, ಮತ್ತೊಂದೆಡೆ, ಮೇ 11ರಂದು ಗುಜರಾತ್ ಟೈಟಾನ್ಸ್ ಪಂದ್ಯವು ಗುಜರಾತ್‌ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಎರಡೂ ಕ್ರೀಡಾಂಗಣಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈಮಧ್ಯೆ, ಜಿಸಿಎಗೆ ಪಾಕಿಸ್ತಾನಿ ಪ್ರಜೆಯಿಂದ ಮೇಲ್ ಬಂದಿದ್ದು, 'ನಾವು ನಿಮ್ಮ ಕ್ರೀಡಾಂಗಣವನ್ನು ಸ್ಫೋಟಿಸುತ್ತೇವೆ' ಎಂದು ಬರೆಯಲಾಗಿದೆ. ಆ ಮೇಲ್ 'ಪಾಕಿಸ್ತಾನ ಜೆಕೆ' ಎಂಬ ಐಡಿಯಿಂದ ಬಂದಿತ್ತು. ಬಿಸಿಸಿಐ ಈಗಾಗಲೇ ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಬೇರೆ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ಮೇ 11 ರಂದು ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಗಳು ಈಗ ಮುಂಬೈನಲ್ಲಿ ನಡೆಯಲಿವೆ. ಮೇ 8 ರಂದು ನಡೆಯಬೇಕಿದ್ದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯವನ್ನೂ ಸ್ಥಳಾಂತರಿಸುವ ಸಾಧ್ಯತೆ ಇದೆ.

ಸದ್ಯಕ್ಕೆ ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಚಂಡೀಗಢ ವಿಮಾನ ನಿಲ್ದಾಣವನ್ನು ಈಗಾಗಲೇ ಮುಚ್ಚಲಾಗಿದ್ದು, ಮುಂಬೈ ತಂಡವು ಮುಂದಿನ ಪಂದ್ಯಕ್ಕಾಗಿ ಅಲ್ಲಿಗೆ ಹೋಗುವುದಿಲ್ಲ. ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 179 ರನ್ ಗಳಿಸಿತು. ನಂತರ ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 2 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿತು.

コメント


bottom of page