'ಎಲ್ಲಾ ಇಲ್ಲಿಗೇ ಮುಕ್ತಾಯವಾಗುತ್ತದೆ ಎಂದು ಭಾವಿಸುತ್ತೇನೆ': ಭಾರತದ 'Op Sindoor'ಗೆ ಅಮೆರಿಕ ಅಧ್ಯಕ್ಷ Trump ಪ್ರತಿಕ್ರಿಯೆ!
- new waves technology
- May 7
- 1 min read
ಉಗ್ರ ದಾಳಿ ನಾಚಿಕೆಗೇಡಿನ ಸಂಗತಿ, "ನಾವು ಓವಲ್ ಕಚೇರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಹಲ್ಗಾಮ್ ದಾಳಿ ಬಗ್ಗೆ ಕೇಳಿದ್ದೇವೆ. ಹಿಂದಿನ ಘಟನೆಗಳನ್ನು ಆಧರಿಸಿ ಏನಾದರೂ ಸಂಭವಿಸಲಿದೆ ಎಂದು ಜನರಿಗೆ ತಿಳಿದಿತ್ತು...

ವಾಷಿಂಗ್ಟನ್: ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ 'Op Sindoor' ಏರ್ ಸ್ಟ್ರೈಕ್ ನಲ್ಲಿ 100ಕ್ಕೂ ಅಧಿಕ ಮಂದಿ ಉಗ್ರರು ಸಾವನ್ನಪ್ಪಿದ್ದು, ಈ ವಿಚಾರ ತಿಳಿಯುತ್ತಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ನಡೆಸಿದ ಸ್ವಲ್ಪ ಸಮಯದ ನಂತರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು. ಎಲ್ಲಾ ಇಷ್ಟಕ್ಕೇ ಮುಕ್ತಾಯವಾಗುತ್ತದೆ ಎಂದು ಭಾವಿಸುತ್ತೇನೆ. ಯುದ್ಧವು "ಬಹಳ ಬೇಗ" ಕೊನೆಗೊಳ್ಳುತ್ತದೆ ಎಂದು ಆಶಿಸುತ್ತೇನೆ ಎಂದು ಹೇಳಿದರು.
ಉಗ್ರ ದಾಳಿ ನಾಚಿಕೆಗೇಡಿನ ಸಂಗತಿ, "ನಾವು ಓವಲ್ ಕಚೇರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಹಲ್ಗಾಮ್ ದಾಳಿ ಬಗ್ಗೆ ಕೇಳಿದ್ದೇವೆ. ಹಿಂದಿನ ಘಟನೆಗಳನ್ನು ಆಧರಿಸಿ ಏನಾದರೂ ಸಂಭವಿಸಲಿದೆ ಎಂದು ಜನರಿಗೆ ತಿಳಿದಿತ್ತು ಎಂದು ನಾನು ಭಾವಿಸುತ್ತೇನೆ. ಅವರು ಬಹಳ ಸಮಯದಿಂದ ಹೋರಾಡುತ್ತಿದ್ದಾರೆ. ನೀವು ನಿಜವಾಗಿಯೂ ಅದರ ಬಗ್ಗೆ ಯೋಚಿಸಿದರೆ ಅವರು (ಭಾರತ ಮತ್ತು ಪಾಕಿಸ್ತಾನ) ಅನೇಕ, ಹಲವು ದಶಕಗಳು ಮತ್ತು ಶತಮಾನಗಳಿಂದ ಹೋರಾಡುತ್ತಿದ್ದಾರೆ ಟ್ರಂಪ್ ಹೇಳಿದರು.
ಇದೇ ವೇಳೆ ಉದ್ವಗ್ನತೆ ಭುಗಿಲೆದ್ದಿರುವ ಕುರಿತು ಉಭಯ ದೇಶಗಳಿಗೆ ಯಾವುದಾದರೂ ಸಂದೇಶ ನೀಡುತ್ತೀರಾ ಎಂದು ಕೇಳಿದಾಗ ಉತ್ತರಿಸಿದ ಟ್ರಂಪ್, "ಇಲ್ಲ, ಅದು ಬಹಳ ಬೇಗ ಕೊನೆಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿರುವ ಒಂಬತ್ತು ಭಯೋತ್ಪಾದಕ ಕೇಂದ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿವೆ. ಇದರಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಭದ್ರಕೋಟೆಯಾದ ಭಹವಲ್ಪುರ್ ಕೂಡ ಸೇರಿದೆ.
'ಆಪರೇಷನ್ ಸಿಂಧೂರ್' ಅಡಿಯಲ್ಲಿ ಮಿಲಿಟರಿ ದಾಳಿಗಳನ್ನು ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯು ಭಾರತ ಮತ್ತು ವಿದೇಶಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ಎರಡು ವಾರಗಳ ನಂತರ ಭಾರತದ ಕ್ರಮಗಳು ಬಂದಿವೆ.
"25 ಭಾರತೀಯರು ಮತ್ತು ಒಬ್ಬ ನೇಪಾಳಿ ನಾಗರಿಕನನ್ನು ಹತ್ಯೆಗೈದ ಬರ್ಬರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಈ ಕ್ರಮಗಳು ಬಂದಿವೆ" ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಅಲ್ಲದೆ ಈ ಹಿಂದೆಯೇ ಭಾರತ "ಪಹಲ್ಗಾಮ್ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂಬ ಬದ್ಧತೆಗೆ ನಾವು ಬದ್ಧರಾಗಿದ್ದೇವೆ" ಎಂದು ಅದು ಹೇಳಿದೆ.
Comments