Pahalgam terror Attack: ಸತತ 11ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಭಾರತ ದಿಟ್ಟ ಉತ್ತರ
- new waves technology
- May 5
- 1 min read
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ.

ಶ್ರೀನಗರ: ಸತತ 11ನೇ ದಿನವೂ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು. ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಇದಕ್ಕೆ ಭಾರತ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ.
ಪಾಕಿಸ್ತಾನಿ ಪಡೆಗಳು ಗಡಿಯಲ್ಲಿ ಹಲವಾರು ಸ್ಥಳಗಳಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ಭಾರತೀಯ ಸೇನೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ ಎಂದು ತಿಳಿಸಿದೆ.
ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹಳಸಿದ್ದು, ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನದಿಂದ ಸತತ 11ನೇ ದಿನವೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ.
Comments