ಬೆಂಗಳೂರು ಕಾಲ್ತುಳಿತ: 'ಮುಚ್ಚಿದ ಲಕೋಟೆ'ಯಲ್ಲಿ ಸ್ಥಿತಿಗತಿ ವರದಿ; ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್!
- new waves technology
- Jun 17
- 1 min read
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಈ ಕುರಿತ ಸ್ವಯಂ ಪ್ರೇರಿತ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಅವರನ್ನೊಳಗೊಂಡ ನ್ಯಾಯಪೀಠ ಇಂದು ವಿಚಾರಣೆ ನಡೆಸಿತು.

ಬೆಂಗಳೂರು: ಬೆಂಗಳೂರು ಕಾಲ್ತುಳಿತದ ಬಗ್ಗೆ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವ ರಾಜ್ಯ ಸರ್ಕಾರದ ಇಂಗಿತವನ್ನು ಹೈಕೋರ್ಟ್ ಮಂಗಳವಾರ ಪ್ರಶ್ನಿಸಿದೆ. ತನಿಖೆ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆಯನ್ನು ಒತ್ತಿ ಹೇಳಿದೆ.
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಈ ಕುರಿತ ಸ್ವಯಂ ಪ್ರೇರಿತ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಮತ್ತು ನ್ಯಾಯಾಧೀಶ ಸಿಎಂ ಜೋಶಿ ಅವರನ್ನೊಳಗೊಂಡ ನ್ಯಾಯಪೀಠ ಇಂದು ವಿಚಾರಣೆ ನಡೆಸಿತು.
ಸರ್ಕಾರದಿಂದ ಸಿದ್ಧಪಡಿಸಲಾಗಿರುವ ಮಧ್ಯಂತರ ಮೌಲ್ಯಮಾಪನ ವರದಿ ಮತ್ತು ಪ್ರಾಥಮಿಕ ತನಿಖೆ ಉಲ್ಲೇಖಿಸಿದ ಅಡ್ವೋಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ಮಾಹಿತಿ ಬಹಿರಂಗಪಡಿಸುವಿಕೆಯಿಂದ ಸರ್ಕಾರ ಹಿಂಜರಿಕೆಯಿಂದ ಹಿಂದೆ ಸರಿಯುವುದಿಲ್ಲ. ಆದರೆ ನಡೆಯುತ್ತಿರುವ ವಿಚಾರಣೆಗಳನ್ನು ಪೂರ್ವಾಗ್ರಹದಿಂದ ತಪ್ಪಿಸಲು ಬಯಸಿದ್ದು, ಮುಂದಿನ ವಾರ ಎರಡು ವರದಿಗಳನ್ನು ನ್ಯಾಯಾಲಯದ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದರು.
Comments