top of page

TN Assembly: ಸತತ 3ನೇ ಸಲ ಭಾಷಣ ಮಾಡದೇ ಹೊರನಡೆದ ರಾಜ್ಯಪಾಲ ಆ‌ರ್.ಎನ್.ರವಿ

Writer: new waves technology
new waves technology
Jan 20
1 min read

ಚೆನ್ನೈ: ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ, ಇಂದು (ಮಂಗಳವಾರ) ರಾಜ್ಯ ಸರ್ಕಾರದ ಭಾಷಣವನ್ನು ಓದದೇ ವಿಧಾನಸಭೆಯಿಂದ ಹೊರನಡೆದಿದ್ದಾರೆ.

ಇದರೊಂದಿಗೆ ಸತತ ಮೂರನೇ ವರ್ಷವೂ ಸರ್ಕಾರ ಸಿದ್ಧಪಡಿಸಿಕೊಟ್ಟ ಭಾಷಣವನ್ನು ಓದಲು ನಿರಾಕರಿಸಿದ್ದಾರೆ.

'ನನಗೆ ನಿರಾಸೆಯಾಗಿದೆ. ರಾಷ್ಟ್ರಗೀತೆಗೆ ಸರಿಯಾದ ಗೌರವ ಸಿಗಲಿಲ್ಲ' ಎಂದು ಆರ್.ಎನ್.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದನಕ್ಕೆ ಆಗಮಿಸಿದ ರವಿ ಅವರನ್ನು ಸ್ಪೀಕರ್ ಎಂ. ಅಪ್ಪಾವು ಅವರು ಸ್ವಾಗತಿಸಿದರು. ಆದರೆ ತಮಿಳುನಾಡು ವಿಧಾನಸಭೆಯನ್ನು ಉದ್ದೇಶಿಸಿ ಭಾಷಣ ಮಾಡದೇ ಹೊರಟು ಹೋದರು.

Comments


bottom of page