top of page

ಕಲಬುರಗಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಅಪಹರಣ

  • Writer: new waves technology
    new waves technology
  • Nov 26, 2024
  • 1 min read

ಇಬ್ಬರು ಮಹಿಳೆಯರು ನವಜಾತ ಶಿಶುವಿನೊಂದಿಗೆ ಆಸ್ಪತ್ರೆಯಿಂದ ಓಡಿಹೋಗುತ್ತಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ree









ಕಲಬುರಗಿ: ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಆಸ್ಪತ್ರೆಯ ನರ್ಸ್ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು ನವಜಾತ ಗಂಡು ಮಗುವನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆಯ ಆವರಣದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇಬ್ಬರು ಮಹಿಳೆಯರು ಕ್ಯಾಂಪಸ್‌ನಲ್ಲಿ ಅಲೆದಾಡುತ್ತಿರುವುದು ಕಂಡುಬಂದಿದೆ.


ಇಬ್ಬರು ಮಹಿಳೆಯರು ನವಜಾತ ಶಿಶುವಿನೊಂದಿಗೆ ಆಸ್ಪತ್ರೆಯಿಂದ ಓಡಿಹೋಗುತ್ತಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಮುಖವನ್ನು ಭಾಗಶಃ ಮುಚ್ಚಿಕೊಂಡು ಆಸ್ಪತ್ರೆಯ ನರ್ಸ್ ಗಳ ಸೋಗಿನಲ್ಲಿ ಬಂದಿದ್ದ ಇಬ್ಬರು ಮಹಿಳೆಯರು ನವಜಾತ ಶಿಶುವನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

"ಮಗುವಿಗೆ ವಿವಿಧ ಪರೀಕ್ಷೆಗಳನ್ನು ಮಾಡಿಸುವ ಅಗತ್ಯವಿದೆ ಎಂದು ತಾಯಿಗೆ ಹೇಳಿ, ಶಿಶುವನ್ನು ಎತ್ತಿಕೊಂಡು ಓಡಿಹೋಗಿದ್ದಾರೆ" ಎಂದು ಪೊಲೀಸರು ಹೇಳಿದ್ದಾರೆ.

"ನಾವು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 137(ಅಪಹರಣ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಮಗುವನ್ನು ಪತ್ತೆ ಮಾಡಲು ಮೂರು ತಂಡಗಳನ್ನು ರಚಿಸಲಾಗಿದೆ. ನಮಗೆ ಕೆಲವು ಸುಳಿವುಗಳು ಸಿಕ್ಕಿವೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Comments


bottom of page