top of page

"ಜೊತೆಯಲ್ಲಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ": ಆತ್ಮೀಯ ಸ್ನೇಹಿತ Donald Trump ಪದಗ್ರಹಣಕ್ಕೆ PM Modi ಅಭಿನಂದನಾ ಸಂದೇಶ

  • Writer: new waves technology
    new waves technology
  • Jan 21
  • 1 min read

ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಟ್ರಂಪ್ ಅವರ 2 ನೇ ಅವಧಿಯ ಆಡಳಿತ ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.

ree

ನವದೆಹಲಿ: ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಜ.20 ರಂದು ಭಾರತೀಯ ಕಾಲಮಾನ ರಾತ್ರಿ 10:30 ರ ವೇಳೆಗೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಅಮೇರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಟ್ರಂಪ್ ಅವರ 2 ನೇ ಅವಧಿಯ ಆಡಳಿತ ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.


"ನಮ್ಮ ಎರಡೂ ದೇಶಗಳಿಗೆ ಪ್ರಯೋಜನವನ್ನು ನೀಡಲು ಮತ್ತು ಜಗತ್ತಿಗೆ ಉತ್ತಮ ಭವಿಷ್ಯವನ್ನು ರೂಪಿಸಲು ಮತ್ತೊಮ್ಮೆ ನಿಕಟವಾಗಿ, ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ" ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಟ್ರಂಪ್ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿಲ್ಲ. ಆದರೆ ಅವರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ತಮ್ಮ ವಿಶೇಷ ರಾಯಭಾರಿಯಾಗಿ ಕಾರ್ಯಕ್ರಮಕ್ಕೆ ಕಳುಹಿಸಿದ್ದಾರೆ. "ಇಂದು ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಅಮೆರಿಕದ 47 ನೇ ಅಧ್ಯಕ್ಷರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ವಿದೇಶಾಂಗ ಸಚಿವರಾಗಿ ಮತ್ತು ಪ್ರಧಾನಿಯವರ ವಿಶೇಷ ರಾಯಭಾರಿಯಾಗಿ ಭಾರತವನ್ನು ಪ್ರತಿನಿಧಿಸುವ ಸೌಭಾಗ್ಯ ಸಿಕ್ಕಿದೆ" ಎಂದು ಅವರು X ನಲ್ಲಿ ಈ ಹಿಂದೆ ಹೇಳಿದ್ದರು.

Comments


bottom of page