top of page

ಜಿಬಿಎ ವ್ಯಾಪ್ತಿಯ ಐದು ಪಾಲಿಕೆ ಚುನಾವಣೆ: ಜೆಡಿಎಸ್‌-ಬಿಜೆಪಿ ಮೈತ್ರಿ

Writer: new waves technology
new waves technology
Jan 17
1 min read

ಬೆಂಗಳೂರು: ಲೋಕಸಭೆ ಚುನಾವಣೆಯನ್ನು ಬಿಜೆಪಿ ಜತೆಗೂಡಿ ಎದುರಿಸಿದ್ದ ಜೆಡಿಎಸ್, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಾಲಿಕೆಗಳ ಚುನಾವಣೆಯಲ್ಲೂ ಮೈತ್ರಿಗೆ ಮುಂದಾಗಿದೆ.

'ಚುನಾವಣೆಯನ್ನು ಬಿಜೆಪಿ ಜತೆಗೆ ಮೈತ್ರಿಯೊಂದಿಗೇ ಎದುರಿಸೋಣ. ಮೈತ್ರಿಗೆ ಧಕ್ಕೆಯಾಗುವ ರೀತಿಯಲ್ಲಿ ಯಾರೂ ನಡೆದುಕೊಳ್ಳಬಾರದು ' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಬೃಹತ್ ಮುಂಬೈ ನಗರ ಪಾಲಿಕೆಗೆ (ಬಿಎಂಸಿ) ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿಕೂಟವು ಸರಳ

ಬಹುಮತ ಪಡೆದ ಬೆನ್ನಲ್ಲೇ, ಶುಕ್ರವಾರ ಸಂಜೆ ಜೆಡಿಎಸ್ ನಾಯಕರ ಸಭೆ ನಡೆಯಿತು. ಜಿಬಿಎ ವ್ಯಾಪ್ತಿಯ ಪಾಲಿಕೆಗಳ

ಚುನಾವಣಾ ಸಿದ್ಧತಾ ಸಭೆಯಲ್ಲಿ ಬಿಜೆಪಿ ಮೈತ್ರಿಯೊಂದಿಗೆ ಕಣಕ್ಕೆ ಇಳಿಯಲು ನಿರ್ಧರಿಸಲಾಯಿತು ಎಂದು ಪಕ್ಷದ ಪ್ರಕಟಣೆ

ತಿಳಿಸಿದೆ.

Comments


bottom of page