top of page

ಪುಟಿನ್ ನಿವಾಸ ಗುರಿಯಾಗಿಸಿ ಉಕ್ರೇನ್ ದಾಳಿ: ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

  • Writer: new waves technology
    new waves technology
  • Dec 30, 2025
  • 1 min read

ನವದೆಹಲಿ: ಉಕ್ರೇನ್ ಸೇನೆಯು ರಷ್ಯಾ ಅಧ್ಯಕ್ಷ ವ್ಹಾದಿಮಿರ್ ಪುಟಿನ್ ಅವರ ನಿವಾಸವನ್ನು ಗುರಿಯಾಗಿಸಿ ಡೋನ್ ದಾಳಿ ನಡೆಸಿದೆ ಎಂದು ರಷ್ಯಾ ಆರೋಪಿಸಿದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಯುದ್ಧವನ್ನು ಕೊನೆಗಾಣಿಸಲು ಮತ್ತು ಶಾಂತಿಯನ್ನು ಕಾಪಾಡಲು ರಾಜತಾಂತ್ರಿಕತೆಯೇ ವಿಶ್ವಾಸಾರ್ಹ ಮಾರ್ಗವಾಗಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ರಷ್ಯಾದ ಅಧ್ಯಕ್ಷ ಪುಟಿನ್ ನಿವಾಸದ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದ್ದು, ನಾವು ತೀವ್ರ ಕಳವಳಗೊಂಡಿದ್ದೇವೆ. ಯುದ್ಧವನ್ನು ಅಂತ್ಯಗೊಳಿಸಲು ಮತ್ತು ಶಾಂತಿಯನ್ನು ಕಾಪಾಡಲು ರಾಜತಾಂತ್ರಿಕ ಪ್ರಯತ್ನಗಳೇ ಅತ್ಯಂತ ವಿಶ್ವಾಸಾರ್ಹ ಮಾರ್ಗವಾಗಿವೆ. ಇಂತಹ ಪ್ರಯತ್ನಗಳತ್ತ ಗಮನಹರಿಸುವಂತೆ ನಾವು ಸಂಬಂಧಪಟ್ಟ ಎಲ್ಲರನ್ನೂ ಒತ್ತಾಯಿಸುತ್ತೇವೆ' ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Comments


bottom of page