top of page

ಪಶ್ಚಿಮ ಬಂಗಾಳ: ಕಾರು-ಬಸ್ ಮುಖಾಮಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಆರು ಮಂದಿ ಸಾವು

  • Writer: new waves technology
    new waves technology
  • May 20
  • 1 min read

ಕೃಷ್ಣನಗರ-ಕರಿಂಪುರ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಕಂಥಾಲಿಯಾ ಪ್ರದೇಶದ ಬಳಿ ಆರು ಜನರಿದ್ದ ಕಾರು ಮತ್ತು ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ree

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಮಂಗಳವಾರ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕನಿಷ್ಠ ಆರು ಜನ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃಷ್ಣನಗರ-ಕರಿಂಪುರ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಕಂಥಾಲಿಯಾ ಪ್ರದೇಶದ ಬಳಿ ಆರು ಜನರಿದ್ದ ಕಾರು ಮತ್ತು ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಕೃಷ್ಣನಗರ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

"ಖಾಸಗಿ ಕಾರು ಕೃಷ್ಣನಗರದಿಂದ ಕೋಲ್ಕತ್ತಾಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಖಾಸಗಿ ಕಾರು ನಜ್ಜುಗುಜ್ಜಾಗಿದೆ ಮತ್ತು ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ" ಎಂದು ಅಧಿಕಾರಿ ಹೇಳಿದ್ದಾರೆ.

ನಜ್ಜುಗುಜ್ಜಾದ ಕಾರಿನಿಂದ ಶವಗಳನ್ನು ಹೊರತೆಗೆಯಲು ಕಟ್ಟರ್‌ಗಳನ್ನು ಬಳಸಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Comments

bottom of page