top of page

ಬಲಿಷ್ಠ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು; ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್‌ಗೆ ದಂಡ ವಿಧಿಸಿದ BCCI!

Writer: new waves technology
new waves technology
May 12
1 min read
ಐಪಿಎಲ್ ಅಂಕಪಟ್ಟಿಯಲ್ಲಿ ಸದ್ಯ ಏಳನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಭಾನುವಾರ ತನ್ನ ತವರಿನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ.
ಐಪಿಎಲ್ ಅಂಕಪಟ್ಟಿಯಲ್ಲಿ ಸದ್ಯ ಏಳನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಭಾನುವಾರ ತನ್ನ ತವರಿನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ.

ಧರ್ಮಶಾಲಾ: ಇಂಡಿಯನ್ ಪ್ರೀಮಿಯರ್ ಲೀಗ್‌ (IPL) 2026ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ ಗೆಲುವು ಸಾಧಿಸುವ ಮೂಲಕ ಪ್ಲೇಆಫ್ ಆಸೆಯನ್ನು ಜೀವಂತವಾಗಿಟ್ಟುಕೊಂಡಿದೆ. ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಡೆಲ್ಲಿ ತಂಡದ ನಾಯಕ ಅಕ್ಷರ್ ಪಟೇಲ್ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ.

ಅಕ್ಷರ್ ಮತ್ತು ಡೇವಿಡ್ ಮಿಲ್ಲರ್ ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ಡಿಸಿ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಮೂರು ವಿಕೆಟ್‌ಗಳಿಂದ ಸೋಲಿಸಲು ಮತ್ತು ಪ್ಲೇಆಫ್ ಅವಕಾಶಗಳನ್ನು ಜೀವಂತವಾಗಿಟ್ಟುಕೊಳ್ಳಲು ನೆರವಾಯಿತು.

'ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧದ ಐಪಿಎಲ್ 2026ರ ಪಂದ್ಯ ಸಂಖ್ಯೆ 55 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ನಾಯಕ ಅಕ್ಷರ್ ಪಟೇಲ್ ಅವರಿಗೆ ದಂಡ ವಿಧಿಸಲಾಗಿದೆ' ಎಂದು ಐಪಿಎಲ್ ಹೇಳಿಕೆ ತಿಳಿಸಿದೆ. 'ಐಪಿಎಲ್‌ನ ನೀತಿ ಸಂಹಿತೆಯ ಆರ್ಟಿಕಲ್ 2.22ರ ಅಡಿಯಲ್ಲಿ, ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ, ಅಕ್ಷರ್ ಪಟೇಲ್‌ಗೆ ₹12 ಲಕ್ಷ ದಂಡ ವಿಧಿಸಲಾಗಿದೆ' ಎಂದು ಅದು ಹೇಳಿದೆ.

ಅಂಕಪಟ್ಟಿಯಲ್ಲಿ ಸದ್ಯ ಏಳನೇ ಸ್ಥಾನದಲ್ಲಿರುವ ಡಿಸಿ, ಭಾನುವಾರ ತನ್ನ ತವರಿನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ.

Comments


bottom of page