top of page

ಭಾರತದ ವಿರುದ್ಧ ಸೇಡು: ಭಾರತೀಯ ಹೈಕಮಿಷನ್‌ ಸಿಬ್ಬಂದಿಯನ್ನು ‘persona non grata’ ಎಂದು ಘೋಷಿಸಿದ ಪಾಕಿಸ್ತಾನ; 24 ಗಂಟೆಯೊಳಗೆ ದೇಶ ತೊರೆಯುವಂತೆ ಸೂಚನೆ

  • Writer: new waves technology
    new waves technology
  • May 14
  • 1 min read

ಭಾರತೀಯ ರಾಯಊಾರಿ ಅಧಿಕಾರಿಗಳನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಸಿಕೊಂಡಿರುವ ಪಾಕಿಸ್ತಾನ. ಅಲ್ಲಿ ತನ್ನ ನಿರ್ಧಾರವನ್ನು ತಿಳಿಸಿ, ಅಧಿಕಾರಿಯನ್ನು 24 ಗಂಟೆಗಳ ಒಳಗೆ ದೇಶವನ್ನು ತೊರೆಯುವಂತೆ ನಿರ್ದೇಶಿಸಿದೆ ಎಂದು ತಿಳಿದುಬಂದಿದೆ.

ree

ಇಸ್ಲಾಮಾಬಾದ್: ನವದೆಹಲಿಯಲ್ಲಿರುವ ಪಾಕಿಸ್ತಾನ ರಾಜತಾಂತ್ರಿಕರನ್ನು ಭಾರತ ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಭಾರತದ ವಿರುದ್ಧ ಸೇಡು ತೀರಿಸಿಕೊಂಡಿದ್ದು, ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್‌ನ ಸಿಬ್ಬಂದಿಯನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸಿದೆ.

ಭಾರತೀಯ ರಾಯಊಾರಿ ಅಧಿಕಾರಿಗಳನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಸಿಕೊಂಡಿರುವ ಪಾಕಿಸ್ತಾನ. ಅಲ್ಲಿ ತನ್ನ ನಿರ್ಧಾರವನ್ನು ತಿಳಿಸಿ, ಅಧಿಕಾರಿಯನ್ನು 24 ಗಂಟೆಗಳ ಒಳಗೆ ದೇಶವನ್ನು ತೊರೆಯುವಂತೆ ನಿರ್ದೇಶಿಸಿದೆ ಎಂದು ತಿಳಿದುಬಂದಿದೆ.

ಇಸ್ಲಾಮಾಬಾದ್‌ನ ಭಾರತೀಯ ಹೈಕಮಿಷನ್‌ನ ಸಿಬ್ಬಂದಿಯನ್ನು ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಲಾಗಿದೆ. ಪಾಕಿಸ್ತಾನ ಸರ್ಕಾರವು ಇಸ್ಲಾಮಾಬಾದ್‌ನ ಭಾರತೀಯ ಹೈಕಮಿಷನ್‌ನ ಸಿಬ್ಬಂದಿಯನ್ನು ಅವರ ವಿಶೇಷ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಿದೆ. ಸಂಬಂಧಪಟ್ಟ ಅಧಿಕಾರಿಯನ್ನು 24 ಗಂಟೆಗಳ ಒಳಗೆ ಪಾಕಿಸ್ತಾನವನ್ನು ತೊರೆಯುವಂತೆ ನಿರ್ದೇಶಿಸಲಾಗಿದೆ.” ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಮಂಗಳವಾರ ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಪ್ರಜೆಯೊಬ್ಬರು ಭಾರತದಲ್ಲಿ ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಅವರನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಭಾರತ ಘೋಷಿಸಿದತ್ತು.

ಈ ಅಧಿಕಾರಿ ಭಾರತದಲ್ಲಿನ ತನ್ನ ರಾಜತಾಂತ್ರಿಕ ಮಾನದಂಡಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಆ ಅಧಿಕಾರಿ ದೆಹಲಿಯಲ್ಲಿ ಕುಳಿತುಕೊಂಡು ಭಾರತ ವಿರೋಧಿ ಚಟುವಟಿಕೆಗಳು ಮತ್ತು ಪಿತೂರಿಗಳಲ್ಲಿ ಭಾಗಿಯಾಗಿದ್ದ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರ, ರಾಜತಾಂತ್ರಿಕ ಮಾನದಂಡಗಳ ಉಲ್ಲಂಘನೆಯನ್ನು ಸಹಿಸುವುದಿಲ್ಲ ಮತ್ತು ಅಂತಹ ಸಂದರ್ಭಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿತ್ತು.

ಪಹಲ್ಗಾಮ್ ಭಯೋತ್ಪಾದನೆ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಗಡಿಯಾಚೆಗಿನ ನಾಲ್ಕು ರಾತ್ರಿಗಳು ನಡೆದ ಉಭಯ ದೇಶಗಳ ಮಿಲಿಟರಿ ಕಾರ್ಯಾಚರಣೆ ಬಳಿಕ ಮೇ 10 ರಂದು ಕದನ ವಿರಾಮ ಒಪ್ಪಂದ ಜಾರಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಭಾರತ ಹಾಗೂ ಪಾಕಿಸ್ತಾನ ನಡುವೆ ರಾಯಭಾರಿ ವಜಾ ಸಮರ ಶುರುವಾಗಿದೆ.

Comments


bottom of page