top of page

ಮಂಗಳೂರು: ಅಬ್ದುಲ್ ರಹೀಂ ಹತ್ಯೆ ಖಂಡಿಸಿ ಮುಸ್ಲಿಂ ಮುಖಂಡರಿಂದ ಮಹತ್ವದ ನಿರ್ಧಾರ; ಅಡಕತ್ತರಿಯಲ್ಲಿ ಕಾಂಗ್ರೆಸ್‌!

  • Writer: new waves technology
    new waves technology
  • May 28
  • 1 min read

ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಮುಖಂಡರು ಬೇಸರ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ree

ಮಂಗಳೂರು: ಮಂಗಳೂರಿನಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಬೆನ್ನಲ್ಲೇ ಇದೀಗ ಪಿಕಪ್ ವಾಹನ ಚಾಲಕನಾಗಿದ್ದ ಅಬ್ದುಲ್ ರಹೀಮ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಘಟನೆ ಇದೀಗ ಮಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ.

ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಮುಖಂಡರು ಬೇಸರ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ನಾಳೆ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧಾರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನ ಶಾದಿ ಮಹಲ್ ಹಾಲ್‌ನಲ್ಲಿ ನಾಳೆ ಸಂಜೆ ಸಭೆ ನಡೆಯಲಿದ್ದು ನಂತರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎನ್ನುವ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Comments


bottom of page