top of page

ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆ: ಅವಿರೋಧ ಆಯ್ಕೆಯಲ್ಲಿ ಮಹಾಯುತಿ ಮೇಲುಗೈ

  • Writer: new waves technology
    new waves technology
  • Jan 3
  • 1 min read

ಮುಂಬೈ: ಮಹಾರಾಷ್ಟ್ರದಲ್ಲಿ ಇದೇ 15ರಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ಅವಿರೋಧ ಆಯ್ಕೆಯಲ್ಲಿ ಬಿಜೆಪಿ ಮತ್ತು ಅದರ ನೇತೃತ್ವದ ಮಹಾಯುತಿ ಮೈತ್ರಿಕೂಟದ ಮಿತ್ರ ಪಕ್ಷಗಳ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ.

ರಾಜ್ಯದಾದ್ಯಂತ ಬಿಜೆಪಿ ಮತ್ತು ಅದರ ಮಹಾಯುತಿ ಮಿತ್ರಪಕ್ಷಗಳು 68 ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿವೆ. ಈ ಆಯ್ಕೆಯನ್ನು ಖಂಡಿಸಿರುವ ವಿರೋಧ ಪಕ್ಷಗಳು, ಆಡಳಿತ ಪಕ್ಷವು ಬೆದರಿಕೆ ಮತ್ತು ಹಣವನ್ನು ಬಳಸಿಕೊಂಡು ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಿದೆ ಎಂದು ಆರೋಪಿಸಿವೆ.

ರಾಜ್ಯದಾದ್ಯಂತ, ಬಿಜೆಪಿ ಮತ್ತು ಮಹಾಯುತಿಯಿಂದ 68 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದ ಬೆಳೆಯುತ್ತಿರುವ ಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ಹೇಳಿದ್ದಾರೆ.

ಈ ಪೈಕಿ ಬಿಜೆಪಿಯಿಂದ 44 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಥಾಣೆ ಜಿಲ್ಲೆಯ ಕಲ್ಯಾಣ್-ಡೊಂಬಿವಿ ಮುನ್ಸಿಪಲ್ ಕಾರ್ಪೊರೇಷನ್, ಪುಣೆ, ಪಿಂಪ್ರಿ ಚಿಂಚ್‌ವಾಡ್, ಪನ್ವೇಲ್, ಭಿವಾಂಡಿ, ಧುಲೆ, ಜಲಗಾಂವ್ ಮತ್ತು ಅಹಲ್ಯಾನಗರದಿಂದ ಹೆಚ್ಚು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Comments


bottom of page