ಲೋಕಸಭಾ ಚುನಾವಣೆಯಲ್ಲಿ 'ಮತಗಳ್ಳತನ' ಆರೋಪ: ರಾಹುಲ್ ಗಾಂಧಿ ಬಳಿ ದಾಖಲೆಗಳಿವೆ ಎಂದ ಸಿಎಂ ಸಿದ್ದರಾಮಯ್ಯ!
- new waves technology
- Jul 31
- 1 min read
ಕಳೆದ ಲೋಕಸಭಾ ಚುನಾವಣೆ ಅವಧಿಯಲ್ಲಿ ಕರ್ನಾಟಕದ ಕ್ಷೇತ್ರವೊಂದರಲ್ಲಿ ಭಾರಿ ಮತಗಳ್ಳತನ ಬಗ್ಗೆ ಕಾಂಗ್ರೆಸ್ ಅಧ್ಯಯನ ನಡೆಸಿರುವುದಾಗಿ ಜುಲೈ 23 ರಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಬೆಂಗಳೂರು: ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜ್ಯದಲ್ಲಿನ 'ಮತಗಳ್ಳತನ' ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳಿ ದಾಖಲೆಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ.
ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿವಾದದ ನಡುವೆ ದೇಶದಲ್ಲಿ ಚುನಾವಣೆಯಲ್ಲಿ ಮತಗಳ್ಳತನ ನಡೆಯುತ್ತಿದೆ. ಕಳೆದ ಲೋಕಸಭಾ ಚುನಾವಣೆ ಅವಧಿಯಲ್ಲಿ ಕರ್ನಾಟಕದ ಕ್ಷೇತ್ರವೊಂದರಲ್ಲಿ ಭಾರಿ ಮತಗಳ್ಳತನ ಬಗ್ಗೆ ಕಾಂಗ್ರೆಸ್ ಅಧ್ಯಯನ ನಡೆಸಿರುವುದಾಗಿ ಜುಲೈ 23 ರಂದು ರಾಹುಲ್ ಗಾಂಧಿ ಆರೋಪಿಸಿದ್ದರು.
ಈ ಸಂಬಂಧ ಆಗಸ್ಟ್ 5 ರಂದು ನಡೆಯಲಿರುವ ಚುನಾವಣೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ದಾಖಲೆ ಹೊಂದಿದ್ದು,ಚುನಾವಣಾ ಆಯೋಗದ ಅಧಿಕಾರಿಗಳಿಗೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ ಪ್ರತಿಭಟನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಪ್ರತಿಭಟನಾ ಸ್ಥಳ ಹಾಗೂ ಯಾವ ರೀತಿ ಪ್ರತಿಭಟನೆ ನಡೆಸಬೇಕು ಎಂಬುದರ ಕುರಿತು ಶೀಘ್ರದಲ್ಲಿಯೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಇಂದು ನಡೆಯಲಿರುವ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಹೇಳಿದ್ದಾರೆ.
ರಾಹುಲ್ ಗಾಂಧಿ ಹೇಳಿದ್ದೇನು? ಕರ್ನಾಟಕದಲ್ಲಿ ಭಾರಿ ಮತಗಳ್ಳತನ ನಡೆದಿದೆ. ಚುನಾವಣೆಯಲ್ಲಿ ಹೇಗೆ 'ಮತಗಳ್ಳತನ' ನಡೆಯುತ್ತಿದೆ ಎಂಬುದನ್ನು ಜನರು ಹಾಗೂ ಚುನಾವಣಾ ಆಯೋಗದ ಮುಂದೆ ಇಡುತ್ತೇನೆ ಎಂದು ಹೇಳಿದ್ದರು.
ಕರ್ನಾಟಕದಲ್ಲಿ ಒಂದು ಲೋಕಸಭಾ ಕ್ಷೇತ್ರವನ್ನು ಆಯ್ದುಕೊಂಡು ಆಳವಾಗಿ ಅಧ್ಯಯನ ನಡೆಸಿದ್ದು, ಇಡೀ ಕ್ಷೇತ್ರದ ಮತದಾರರ ಪಟ್ಟಿಯನ್ನು (ಡಿಜಿಟಲ್ ) ತೆಗೆದುಕೊಂಡು ಅದನ್ನು ವಿಶ್ಲೇಷಣೆಗೆ ಒಳಪಡಿಸಿವುದು. ಇದಕ್ಕೆ 6 ತಿಂಗಳ ಸಮಯ ಬೇಕಾಯಿತು. ಈ ವಿಶ್ಲೇಷಣೆ ಮೂಲಕ ಅವರು ಮತದಾರರ ಪಟ್ಟಿಯಲ್ಲಿ ಹೇಗೆ ಅಕ್ರಮ ಎಸಗುತ್ತಾರೆ. ಹೊಸ ಮತದಾರರನ್ನು ಹೇಗೆ ಸೇರ್ಪಡೆ ಮಾಡುತ್ತಾರೆ ಅವರನ್ನು ಎಲ್ಲಿಂದ ಕರೆತರುತ್ತಾರೆ ಎಂಬುದು ಸೇರಿದಂತೆ ಅವರ ಮತಗಳ್ಳತನದ ಸಂಪೂರ್ಣ ಕಾರ್ಯವಿಧಾನವನ್ನೇ ತಿಳಿದುಕೊಂಡಿದ್ದೇವೆ ಎಂದು ಹೇಳಿದ್ದರು.
ಇದೇ ವೇಳೆ ಧರ್ಮಸ್ಥಳ ಸುತ್ತಮುತ್ತ ನಡೆದಿದೆ ಎನ್ನಲಾದ ಸರಣಿ ಕೊಲೆ ಆರೋಪ ಕುರಿತ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ-SIT ಮುಖ್ಯಸ್ಥ ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಒಂದು ವೇಳೆ ಕೇಂದ್ರ ಸರ್ಕಾರದ ಕರ್ತವ್ಯಕ್ಕೆ ನಿಯೋಜನೆಯಾದರೆ ಅವರ ಜಾಗಕ್ಕೆ ಮತ್ತೊಬ್ಬರನ್ನು ನಿಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
Comments