top of page

ವಿದೇಶಿ ಬಂಡವಾಳ ಸ್ವೀಕಾರ: ಮಹಾರಾಷ್ಟ್ರ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಕರ್ನಾಟಕ!

  • Writer: new waves technology
    new waves technology
  • Sep 5
  • 1 min read

ಕಳೆದ ಹಲವು ವರ್ಷಗಳಿಂದ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿತ್ತು. ಇದೀಗ ಕರ್ನಾಟಕ, ಮಹಾರಾಷ್ಟ್ರವನ್ನು ಹಿಂದಿಕ್ಕಿ ಪ್ರಥಮ ಸ್ಥಾನ ತಲುಪಿದೆ

ree

ಬೆಂಗಳೂರು: ವಿದೇಶಿ ಬಂಡವಾಳ ಸ್ವೀಕಾರದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ₹50,107 ಕೋಟಿ ಬಂಡವಾಳ ರಾಜ್ಯಕ್ಕೆ ಹರಿದುಬಂದಿದೆ.

ಕಳೆದ ಹಲವು ವರ್ಷಗಳಿಂದ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿತ್ತು. ಇದೀಗ ಕರ್ನಾಟಕ, ಮಹಾರಾಷ್ಟ್ರವನ್ನು ಹಿಂದಿಕ್ಕಿ ಪ್ರಥಮ ಸ್ಥಾನ ತಲುಪಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಕರ್ನಾಟಕದ ಬಗೆಗೆ ಅಂತಾರಾಷ್ಟ್ರೀಯ ಹೂಡಿಕೆದಾರರು ಹೊಂದಿರುವ ವಿಶ್ವಾಸ ಮತ್ತು ಭರವಸೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕದ ಈ‌ ಸಾಧನೆಗೆ ನಮ್ಮ‌ ಸರ್ಕಾರದ ನೀತಿಗಳು ರಾಜ್ಯದಲ್ಲಿ ಹೂಡಿಕೆಸ್ನೇಹಿ ಪರಿಸರ ನಿರ್ಮಿಸಿರುವುದು ಕಾರಣ ಎಂಬುದನ್ನು ಈ ಸಂದರ್ಭದಲ್ಲಿ ನೆನೆಯ ಬಯಸುತ್ತೇನೆ ಎಂದಿದ್ದಾರೆ.

Comments


bottom of page