top of page

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಬಿಕೆ ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್

Writer: new waves technology
new waves technology
Jun 3
1 min read
ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 18 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 18 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ ದ್ವೈವಾರ್ಷಿಕ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.

ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 18 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಪಟ್ಟಿಯಲ್ಲಿ ಬಿಕೆ ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್ ಮತ್ತು ಶಿವಣ್ಣ ಮಳವಳ್ಳಿ ಅವರ ಹೆಸರಿದೆ.

ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಇನ್ನು ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರಿಗೆ ಮಣೆ ಹಾಕಿರುವುದು ಅಚ್ಚರಿಕೆ ಕಾರಣವಾಗಿದೆ.

Comments

bottom of page