top of page

ವಿಮಾನ ದುರಂತದಲ್ಲಿ ಮಹಾರಾಷ್ಟ್ರಡಿಸಿಎಂ ಅಜಿತ್‌ ಪವಾರ್‌ ಸಾವು

  • Writer: new waves technology
    new waves technology
  • 2 days ago
  • 1 min read

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಜಿತ್‌ ಪವಾರ್ ಸೇರಿದಂತೆ ಪಿಎಸ್‌ಒ ಜಾಧವ್, ಓರ್ವ ಸಹಾಯಕ, ಇಬ್ಬರು ಪೈಲಟ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಖಚಿತಪಡಿಸಿದೆ.

ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಜಿತ್ ಅವರು ಮುಂಬೈಯಿಂದ ಬಾರಾಮತಿಗೆ ಹೊರಟಿದ್ದರು ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಸಂಪರ್ಕಿಸಿ ಬಾರಾಮತಿ ವಿಮಾನ ದುರಂತದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.


Comments


bottom of page