top of page

ಸಂಪುಟ ಪುನರ್ ರಚನೆ ಕಲ್ಪಿತ ಸುದ್ದಿ; ಪಕ್ಷದ ಸಹಯೋಗದಲ್ಲಿ ಸ್ವಾಭಿಮಾನಿ ಸಮಾವೇಶ: ಸಿಎಂ ಸಿದ್ದರಾಮಯ್ಯ

Writer: new waves technology
new waves technology
Nov 29, 2024
1 min read

ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ನಾನು ರಾಹುಲ್ ಗಾಂಧಿಯವರು ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ.










ನವದೆಹಲಿ: ರಾಜ್ಯ ಸಚಿವ ಸಂಪುಟ ಪುನರ್ ರಚನೆಯ ಸುದ್ದಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಳ್ಳಿ ಹಾಕಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ನಾನು ರಾಹುಲ್ ಗಾಂಧಿಯವರು ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ತಿಳಿಸಿದರು.

ಮಾಧ್ಯಮಗಳು ಸಂಪುಟ ಪುನರ್ ರಚನೆಯ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನರ್‌ರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು.


ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ ಎಂದು ತಿಳಿಸಿದರು.

ಹಾಸನ: ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು

ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿತ್ತು. ಸಮಾವೇಶʼದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅನಾಯಮಧೇಯ ವ್ಯಕ್ತಿಯಿಂದ ದೂರು ಸಲ್ಲಿಕೆ ಮಾಡಲಾಗಿತ್ತು. ಹೀಗಾಗಿ ಸಮಾವೇಶ ವಿಚಾರದಲ್ಲಿ ಎಐಸಿಸಿ ಎಂಟ್ರಿಯಾಗಿದ್ದು, ಪಕ್ಷದ ವೇದಿಕೆಯಿಂದಲೇ ಸಮಾವೇಶ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Comments


bottom of page