top of page

ಹಿಂದೂಗಳ ಮೇಲಿನ ದಾಳಿ ನಡುವೆ ಬಾಂಗ್ಲಾ-ಭಾರತ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ

Writer: new waves technology
new waves technology
Dec 9, 2024
1 min read

ಆಗಸ್ಟ್ 2024 ರಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದೆ

ಢಾಕಾ: ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಪುನರಾವರ್ತಿತ ದಾಳಿಗಳ ಮಧ್ಯೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸೋಮವಾರ ತಮ್ಮ ಬಾಂಗ್ಲಾದೇಶದ ವಿದೇಶಾಂಗ ಕಾರ್ಯದರ್ಶಿ ಮೊಹಮ್ಮದ್ ಜಾಶಿಮ್ ಉದ್ದೀನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಆಗಸ್ಟ್ 2024 ರಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದೆ.

ಬಾಂಗ್ಲಾದೇಶದ ಹಿಂದೂ ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಅವರ ಇತ್ತೀಚಿನ ಬಂಧನವು ಉಭಯ ದೇಶಗಳಲ್ಲಿ ಪ್ರತಿಭಟನೆಗೆ ಕಾರಣವಾಗಿದ್ದು, ಬಾಂಗ್ಲಾದೇಶದಲ್ಲಿ ಹಲವು ಹಿಂದೂಗಳ ವಿರುದ್ಧ ದಾಳಿಯನ್ನು ಪ್ರಚೋದಿಸಿದೆ.


ಹಿಂದೂಗಳ ಮೇಲಿನ ದಾಳಿಯನ್ನು ಭಾರತ ಖಂಡಿಸಿದ್ದು, ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಮಿಸ್ರಿ ಭಾರತೀಯ ವಾಯುಪಡೆಯ ಜೆಟ್‌ನಲ್ಲಿ ಢಾಕಾ ತಲುಪಿದರು ಮತ್ತು ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಈ ವೇಳೆ ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಕೂಡ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.


ಬಾಂಗ್ಲಾದೇಶದ ಸಹವರ್ತಿ ಮೊಹಮ್ಮದ್ ಜಾಶಿಮ್ ಉದ್ದೀನ್ ಅವರೊಂದಿಗಿನ ವ್ಯಾಪಕ ಮಾತುಕತೆಯ ನಂತರ ಮಿಸ್ತಿ ವಿದೇಶಾಂಗ ಸಚಿವ ಮೊಹಮ್ಮದ್ ತೌಹಿದ್ ಹೊಸೈನ್ ಅವರನ್ನು ಭೇಟಿಯಾಗಲಿದ್ದಾರೆ. ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥ ಅಥವಾ ಮುಖ್ಯ ಸಲಹೆಗಾರ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರ ಭೇಟಿಗೂ ಸಹ ನಿರ್ಧರಿಸಿದ್ದಾರೆ.

Comments


bottom of page