top of page

ಹುಬ್ಬಳ್ಳಿಯಿಂದ ಅಹಮದಾಬಾದ್, ಚೆನ್ನೈಗೆ ವಿಮಾನ: ನಾಗರಿಕ ವಿಮಾನಯಾನ ಸಚಿವರಿಗೆ ಪ್ರಲ್ಹಾದ್ ಜೋಶಿ ಮನವಿ

  • Writer: new waves technology
    new waves technology
  • Oct 24, 2024
  • 1 min read

ಹುಬ್ಬಳ್ಳಿಯಿಂದ ಚೆನ್ನೈಗೆ ಇರುವ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸಲಾಗುತಿದ್ದು, ಈ ವಿಮಾನಯಾನವನ್ನು ಮುಂದುವರೆಸುವಂತೆ ಸಚಿವ ನಾಯ್ಡು ಅವರಲ್ಲಿ ಮನವಿ


ree









ನವದೆಹಲಿ: ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಅಹ್ಮದಾಬಾದ್ ಮತ್ತು ಚೆನ್ನೈಗೆ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಾಗರಿಕ ವಿಮಾನಯಾನ ಸಚಿವರ ಬಳಿ ಮನವಿ ಮಾಡಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿಂದು ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಸಚಿವ ರಾಮಮೋಹನ ನಾಯ್ದು ಅವರನ್ನು ಭೇಟಿ ಮಾಡಿದ ಸಚಿವ ಪ್ರಲ್ಹಾದ ಜೋಶಿ, ಹುಬ್ಬಳ್ಳಿಯಿಂದ ಅಹಮದಾಬಾದ್ ನಡುವೆ ವಿಮಾನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವ ಕುರಿತು ಸಮಾಲೋಚನೆ ನಡೆಸಿದರು.

ಚೆನ್ನೈ ವಿಮಾನ ಸ್ಥಗಿತ ಬೇಡ: ಇನ್ನು, ಹುಬ್ಬಳ್ಳಿಯಿಂದ ಚೆನ್ನೈಗೆ ಇರುವ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸಲಾಗುತಿದ್ದು, ಈ ವಿಮಾನಯಾನವನ್ನು ಮುಂದುವರೆಸುವಂತೆ ಸಚಿವ ನಾಯ್ಡು ಅವರನ್ನು ಕೋರಿದ್ದಾರೆ.

ಛೋಟಾ ಮುಂಬೈ ಎಂದೇ ಹೆಸರಾದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಅನೇಕ ಉದ್ಯಮಿಗಳ ಸಂಪರ್ಕವಿದೆ. ಅಹ್ಮದಾಬಾದ್ ಮತ್ತು ಚೆನ್ನೈ ನಗರಗಳಿಗೆ ವಿಮಾನ ಸಾರಿಗೆ ಸೌಲಭ್ಯಕ್ಕೆ ಹೆಚ್ಚು ಆದ್ಯತೆ ನೀಡಿದಲ್ಲಿ ಉದ್ಯಮಿಗಳ ತ್ವರಿತ ಸಂಚಾರ ಮತ್ತು ನಿಕಟ ಸಂಪರ್ಕಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣ ವಿಸ್ತರಣೆಗೆ ಕೇಂದ್ರ ಸರ್ಕಾರದಿಂದ 273 ಕೋಟಿ ರೂ. ಅನುದಾನ!

ಹುಬ್ಬಳ್ಳಿ ಒಂದು ಪ್ರಮುಖ ವಾಣಿಜ್ಯ ಕೇಂದ್ರ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಹ ಗುರುತಿಸಿಕೊಳ್ಳುತ್ತಿದೆ. ಅಂತೆಯೇ ರೈಲ್ವೆ ನಿಲ್ದಾಣದ ಜೊತೆಗೆ ವಿಮಾನ ನಿಲ್ದಾಣವೂ ಅಂತಾರಾಷ್ಟ್ರೀಯ ಮೆರುಗಿನಲ್ಲಿ ಅಭಿವೃದ್ಧಿ ಹೊಂದುತ್ತಿದೆ.

ವಿಶಾಲವಾದ ಪ್ರದೇಶದಲ್ಲಿ ಹೊಸ ಟರ್ಮಿನಲ್ ಸಹ ನಿರ್ಮಾಣ ಕಾಣುತ್ತಿದೆ. ಪ್ರಯಾಣಿಕರಿಗೆ ಮತ್ತು ವಿಮಾನಗಳಿಗೆ ಅಗತ್ಯ ಮೂಲ ಸೌಲಭ್ಯ ಇಲ್ಲಿದ್ದು, ಚೆನ್ನೈ ಸಂಪರ್ಕದ ವಿಮಾನಯಾನ ಸ್ಥಗಿತಗೊಳಿಸದೆ ಮುಂದುವರೆಸಿ ಎಂದು ನಾಗರಿಕ ವಿಮಾನಯಾನ ಸಚಿವರನ್ನು ಒತ್ತಾಯಿಸಿದ್ದಾರೆ.

Comments


bottom of page