top of page

ಹೊಸವರ್ಷದ ಸಂಭ್ರಮದಲ್ಲಿ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ: ಸಿದ್ದರಾಮಯ್ಯ ಮನವಿ

Writer: new waves technology
new waves technology
Dec 30, 2025
1 min read

ಬೆಂಗಳೂರು: 2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ- ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಯನ್ನು ನಾವು ಆದ್ಯತೆಯಾಗಿಟ್ಟುಕೊಂಡಿದ್ದೇವೆ. ಹೀಗಾಗಿ ಹೆಚ್ಚುವರಿ ಗಸ್ತು ವ್ಯವಸ್ಥೆ, ತುರ್ತು ಪ್ರತಿಕ್ರಿಯಾ ಘಟಕ ಹಾಗೂ ಅಗತ್ಯ ಬೆಂಬಲ ವ್ಯವಸ್ಥೆಯೊಂದಿಗೆ ಬೆಂಗಳೂರು ನಗರ ಪೊಲೀಸರು ಸಕಲ ತಯಾರಿ ಮಾಡಿಕೊಂಡಿದ್ದಾರೆ' ಎಂದು ತಿಳಿಸಿದ್ದಾರೆ.

ಯಾವುದೇ ಅಹಿತಕರ ಘಟನೆಗಳು, ಜೀವಹಾನಿಯಾಗದಂತೆ ಸಡಗರದಿಂದ ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರನ್ನು ಸಜ್ಜುಗೊಳಿಸಲಾಗುತ್ತಿದೆ. ಸಂಭ್ರಮಾಚರಣೆಯ ಸಂದರ್ಭದಲ್ಲಿ ಪೊಲೀಸರು ನೀಡುವ ಸಲಹೆ, ಸೂಚನೆಗಳನ್ನು ತಪ್ಪದೇ ಪಾಲಿಸಿ, ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರೊಂದಿಗೆ ಸಹಕರಿಸಿ ಎಂದೂ ಅವರು ಪೋಸ್ಟ್‌ನಲ್ಲಿ ಮನವಿ ಮಾಡಿದ್ದಾರೆ.

Comments


bottom of page